ADVERTISEMENT
ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಉಸ್ತುವಾರಿಗಳನ್ನು ಘೋಷಿಸಿದೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಉಸ್ತುವಾರಿಯಾಗಿ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಮತ್ತು ಸಹ ಉಸ್ತುವಾರಿಯಾಗಿ ಅಶ್ವಿನಿ ವೈಷ್ಣವ್ ಅವರನ್ನು ನೇಮಿಸಿದೆ.
ಹರಿಯಾಣ ವಿಧಾನಸಭಾ ಚುನಾವಣೆಗೆ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ತ್ರಿಪುರ ಮಾಜಿ ಸಿಎಂ ಬಿಪ್ಲಬ್ ದೇವ್ ಅವರನ್ನು ನೇಮಿಸಿದೆ.
ಜಾರ್ಖಂಡ್ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ, ಮಾಜಿ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾಸ್ ಸರ್ಮಾ ಅವರನ್ನು ನೇಮಿಸಿದೆ.
ಜಮ್ಮು-ಕಾಶ್ಮೀರ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಅವರನ್ನು ನೇಮಿಸಿದೆ.
ADVERTISEMENT