ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಸಂಬAಧ ಬಿಜೆಪಿ ತನ್ನ ಆಂತರಿಕ ಸಮೀಕ್ಷೆ ನಡೆಸಿದೆ.
ಈ ಆಂತರಿಕ ಸಮೀಕ್ಷೆ ಬಿಜೆಪಿಗೆ ಆಘಾತಕಾರಿ ಮಾಹಿತಿಯೊಂದನ್ನು ನೀಡಿದೆ. ಈ ಸಮೀಕ್ಷೆಯ ಪ್ರಕಾರ ಈಗ ಇರುವ ಎಲ್ಲ 122 ಮಂದಿ ಶಾಸಕರಿಗೆ ಟಿಕೆಟ್ ನೀಡಿದ್ದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರುವುದೇ ಕಷ್ಟ.
122 ಶಾಸಕರ ಪೈಕಿ 30 ಶಾಸಕರ ವಿರುದ್ಧ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎನ್ನುವುದು ಆಂತರಿಕ ಸಮೀಕ್ಷೆಯಲ್ಲಿ ತಿಳಿದಿದೆ.
ಒಂದು ವೇಳೆ ಈ 30 ಶಾಸಕರಿಗೆ ಟಿಕೆಟ್ ಕೊಟ್ಟು ಅವರು ಆಡಳಿತ ವಿರೋಧಿ ಅಲೆಯಲ್ಲಿ ಸೋತರೆ ಆಗ ಬಿಜೆಪಿ ಮುಂದಿನ ಚುನಾವಣೆಯಲ್ಲಿ 90ಕ್ಕಿಂತ ಕಡಿಮೆ ಸ್ಥಾನ ಗೆಲ್ಲಬಹುದು. ಆಗ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಕಷ್ಟ ಆಗಬಹುದು.
ಈ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಈ 30 ಬಿಜೆಪಿ ಶಾಸಕರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಸಿಗುವುದು ಅನುಮಾನ.
ಉತ್ತರಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದ ಶಾಸಕರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ದೆಹಲಿ ಪಾಲಿಕೆ ಚುನಾವಣೆಯಲ್ಲೂ ಆಡಳಿತ ವಿರೋಧಿ ಅಲೆ ಎದುರಿಸುತ್ತಿದ್ದ ಎಲ್ಲ ಕಾರ್ಪೋರೇಟರ್‌ಗಳನ್ನು ಬದಲಿಸಿ ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿ ಮತ್ತೆ ಅಧಿಕಾರಕ್ಕೆ ಬಂದಿತ್ತು.