ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಮಿತ್ರ ಪಕ್ಷ ಜೆಡಿಎಸ್ಗೆ ಬಿಟ್ಟು ಕೊಟ್ಟಿದೆ. ಈ ಮೂಲಕ ಸೀಟು ಹಂಚಿಕೆ ಸಂಬಂಧ ಇದ್ದ ಗೊಂದಲಕ್ಕೆ ಅಧಿಕೃತ ತೆರೆ ಬಿದ್ದಿದೆ.
ಹಾಸನ, ಮಂಡ್ಯ, ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿದ್ದೇವೆ. ನಾವು ಜೆಡಿಎಸ್ನ್ನು ಬೆಂಬಲಿಸಬೇಕು
ಎಂದು ಕರ್ನಾಟಕದಲ್ಲಿ ಬಿಜೆಪಿಯ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ಹೇಳಿದ್ದಾರೆ.
ಈ ಮೂಲಕ 28 ಲೋಕಸಭಾ ಕ್ಷೇತ್ರಗಳ ಪೈಕಿ ಈ ಬಾರಿ ಬಿಜೆಪಿ 25 ಮತ್ತು ಜೆಡಿಎಸ್ 3 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ.
ಇದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಬಳಿಯೇ ಉಳಿಸಿಕೊಂಡು ಮತ್ತೆ ಸ್ಪರ್ಧೆ ಮಾಡುವ ಸುಮಲತಾ ಅಂಬರೀಶ್ ಅವರ ಕನಸು ನುಚ್ಚು ನೂರಾಗಿದೆ.
1999ರಲ್ಲಿ ದೇವೇಗೌಡರು ಮತ್ತು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜೆಡಿಎಸ್ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅತ್ಯಂತ ಕಡಿಮೆ ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುತ್ತಿದೆ.
2019ರಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ವೇಳೆ ವಿಜಯಪುರ ಮತ್ತು ಉತ್ತರ ಕನ್ನಡ ಕ್ಷೇತ್ರಗಳ ಜೊತೆಗೆ ಹಾಸನ, ಮಂಡ್ಯ, ತುಮಕೂರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲೂ ಜೆಡಿಎಸ್ ಸ್ಪರ್ಧೆ ಮಾಡಿತ್ತು.