ADVERTISEMENT
ಮಾಜಿ ಸಚಿವ ಮತ್ತು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ.
ಬೆಂಗಳೂರಿನಲ್ಲಿ ಈ ಭೇಟಿ ನಡೆದಿದೆ.
ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕ ಶಾಂತನಗೌಡ ವಿರುದ್ಧ ರೇಣುಕಾಚಾರ್ಯ 17 ಸಾವಿರಕ್ಕೂ ಅಧಿಕ ಮತಗಳಿಂದ ಸೋತಿದ್ದರು.
ಉಪ ಮುಖ್ಯಮಂತ್ರಿ ಡಿಕೆಶಿವಕುಮಾರ್ ಅವರನ್ನು ಬಿಜೆಪಿ ನಾಯಕರು ಭೇಟಿ ಮಾಡುತ್ತಿರುವುದು ವಿಶೇಷ. ಬಿಜೆಪಿ ರಾಜ್ಯಸಭಾ ಸಂಸದ ಜಗ್ಗೇಶ್ ಅವರು ಪತ್ನಿ ಜೊತೆಗೆ ಡಿಕೆಶಿ ಅವರನ್ನು ಭೇಟಿಯಾಗಿದ್ದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಅವರು ಕೂಡಾ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದರು.
ADVERTISEMENT