2024ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ತನ್ನ ಹಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ.
ಪ್ರಮುಖವಾಗಿ ಉತ್ತರ ಕನ್ನಡ ಕ್ಷೇತ್ರದ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ.
70 ವರ್ಷ ಮೇಲ್ಪಟ್ಟ ಸಂಸದರಿಗೆ ಬಿಜೆಪಿ ಮತ್ತೆ ಟಿಕೆಟ್ ನೀಡುವ ಸಾಧ್ಯತೆಯೇ ಇಲ್ಲ.
ಆದರೆ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎನ್ನುವುದು ಮಹತ್ವದ್ದು.
ಅನಂತಕುಮಾರ್ ಹೆಗಡೆ ಅವರು ಅಲ್ಪಾವಧಿಗೆ ಪ್ರಧಾನಿ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರು.