ಪ್ರವಾದಿ ಮಹಮ್ಮದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಟಿ ರಾಜಾಸಿಂಗ್ (BJP MLA T Rajasingh) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್ (Hyderbad) ಪೊಲೀಸರು ಶಾಸಕ ರಾಜಾಸಿಂಗ್ ಅವರನ್ನು ಬಂಧಿಸಿದ್ದಾರೆ.
ಪ್ರವಾದಿ ಮಹಮ್ಮದರ ಬಗ್ಗೆ ರಾಜಾಸಿಂಗ್ ಮಾಡಿದ್ದ ಅವಹೇಳನಕಾರಿ ಭಾಷಣದ ವೀಡಿಯೋ ಬಹಿರಂಗ ಆದ ಬಳಿಕ ಹೈದ್ರಾಬಾದ್ ಪೊಲೀಸ್ ಆಯುಕ್ತರ ಕಚೇರಿ ಎದುರು ಮುಸಲ್ಮಾನ ಸಮುದಾಯದವರು ದೊಡ್ಡ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದರು.
ರಾಜಾಸಿಂಗ್ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ. ಪ್ರಚೋದನಕಾರಿ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ವಿವಾದಿತ ರಾಜಕಾರಣಿ.