ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿಯಾಗಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿರುವ ವಸತಿ, ಅಲ್ಪಸಂಖ್ಯಾತ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಕಚೇರಿಯಲ್ಲಿ ಶಾಸಕ ಯತ್ನಾಳ್ ಅವರು ಭೇಟಿಯಾದರು. ತಾವು ಪ್ರತಿನಿಧಿಸ್ತಿರುವ ವಿಜಯಪುರ ವಿಧಾನಸಭಾ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕೆಲಸಗಳ ಸಂಬಂಧ ಸಚಿವ ಜಮೀರ್ ಜೊತೆಗೆ ಮಾತುಕತೆ ನಡೆಸಿದರು.
ಸಚಿವ ಜಮೀರ್ ಮತ್ತು ಶಾಸಕ ಯತ್ನಾಳ್ ಇಬ್ಬರೂ ಅಕ್ಕಪಕ್ಕ ಕುಳಿತು ನಗುತ್ತಾ ಮಾತುಕತೆ ನಡೆಸಿದರು. ಇಬ್ಬರೂ ನಗುತ್ತಲೇ ಕೈ ಕುಲುಕಿದರು. ಇವರಿಬ್ಬರ ಭೇಟಿ ವೇಳೆ ಅರಸೀಕೆರೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಕೂಡಾ ಇದ್ದರು.
ADVERTISEMENT
ADVERTISEMENT