ಬಿಜೆಪಿ ತನ್ನ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಯನ್ನು ಪುನರ್ರಚಿಸಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿಗೆ ಸೇರಿಸಿಕೊಂಡಿದೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚವ್ಹಾಣ್ ಅವರನ್ನು ಕೈಬಿಡಲಾಗಿದೆ.
ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರನ್ನು ಸಂಸದೀಯ ಮಂಡಳಿಗೆ ಸೇರಿಸಿದ್ದು ಮಹತ್ವ ಪಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿಯೇ ಟಿಕೆಟ್ ಅಂತಿಮಗೊಳಿಸುತ್ತದೆ.
ಪಟ್ಟಿಯಲ್ಲಿ ಐದನೇಯವರಾಗಿ ಯಡಿಯೂರಪ್ಪ ಅವರ ಹೆಸರನ್ನು ಕಾಣಿಸಲಾಗಿದೆ. 11ನೇಯವರಾಗಿ ಬಿ ಎಲ್ ಸಂತೋಷ್ ಅವರನ್ನು ಕಾಣಿಸಲಾಗಿದೆ
ಅಸ್ಸಾಂನ ಮಾಜಿ ಸಿಎಂ ಸರ್ಬಾನಂದ ಸೋನಾವಾಲಾ, ತೆಲಂಗಾಣ ಮೂಲದ ರಾಜ್ಯಸಭಾ ಸಂಸದ ಕೆ ಲಕ್ಷ್ಮಣ್, ಸುಧಾ ಯಾದವ್, ಸತ್ಯನಾರಾಯಣ್ ಜತಿಯಾ, ಇಕ್ಬಾಲ್ ಸಿಂಗ್ ಲಾಲ್ಪುರ ಅವರನ್ನು ಸೇರ್ಪಡೆಗೊಳಿಸಲಾಗಿದೆ.
ಸಂಸದೀಯ ಮಂಡಳಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜ್ನಾಥ್ ಸಿಂಗ್, ಬಿ ಎಲ್ ಸಂತೋಷ್ ಇದ್ದಾರೆ.
ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಸಂಸದೀಯ ಮಂಡಳಿ ಸದಸ್ಯರೂ ಮಾತ್ರವಲ್ಲದೇ ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನಾವೀಸ್, ಭೂಪೇಂದ್ರ ಯಾದವ್, ಓಂ ಮಾಥೂರ್, ತಮಿಳುನಾಡು ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಸೇರಿದಂತೆ ಒಟ್ಟು 15 ಮಂದಿ ಇದ್ದಾರೆ.