ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸ್ತು.
ಜನರಿಗೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸುವುದಕ್ಕಾಗಿ ಪೆಟ್ರೋಲ್-ಡಿಸೇಲ್ ಸೇರಿದಂತೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮೂಲಕ ಜನಸಾಮಾನ್ಯರ ಮೇಲೆ ಬರೆ ಹಾಕುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ADVERTISEMENT
ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎತ್ತಿನ ಬಂಡಿಯಲ್ಲಿ ಮೆರವಣಿಗೆ ಬರುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು.
ADVERTISEMENT