ಉತ್ತರ ಪ್ರದೇಶದ ಕಾನ್ಪುರದಲ್ಲಿ ಕೋಮು ಗಲಭೆಗೆ ಕಾರಣರಾಗಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಿಜೆಪಿ ತನ್ನ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದೆ.
ಖಾಸಗಿ ವಾಹಿನಿಯ ಟಿವಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಬಿಜೆಪಿ ವಕ್ತಾರ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಪೈಂಗಬರ್ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಶುಕ್ರವಾರ ಕಾನ್ಪುರದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು.
ಈ ಕೋಮು ಗಲಾಟೆಯಲ್ಲಿ ಹಲವು ವಾಹನಗಳಿಗೆ ಬೆಂಕಿ ಹಾಕಲಾಗಿತ್ತು ಅಲ್ಲದೇ ಎರಡು ಗುಂಪುಗಳ ಪರಸ್ಪರ ಕಲ್ಲು ತೂರಾಟ ನಡೆಸಿದ್ದವು. ಈ ಗಲಭೆಗೆ ಸಂಬಂಧಿಸಿದಂತೆ ಈಆಗಾಗಲೇ ಪೊಲೀಸರು 22 ಕ್ಕಿಂತಲೂ ಅಧಿಕ ಜನರನ್ನು ಬಂಧಿಸಿದ್ದಾರೆ.
ಇಡೀ, ಗಲಭೆಗೆ ಕಾರಣರಾಗಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಹಾಗೂ ನವೀನ್ ಜಿಂದಾಲ್ ಅವರನ್ನು ಬಿಜೆಪಿ ತನ್ನ ಪ್ರಾಥಮಿಕ ಸದಸ್ಯತ್ವದಿಂದ ತೆಗೆದುಹಾಕಿದೆ.