ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದು ಸಂಘಟನೆಗಳಿಗೆ ಪಾಠ ಮಾಡುತ್ತಿದೆ ಎಂದು ಹೆಚ್ಡಿಕೆ ಹೇಳಿಕೆಗೆ ಬಿಜೆಪಿ ವ್ಯಂಗ್ಯವಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ ಎಂದು ಹೇಳಿದೆ.
ನಿನ್ನೆಯಷ್ಟೇ, ಜೆಡಿಎಸ್ ನಾಯಕ ಕುಮಾರಸ್ವಾಮಿಯವರು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರಿಗೆ ಹಿಂದುತ್ವದ ಬಗ್ಗೆ ಹೇಳಿದ್ದರು. ಇಂದು ಕರ್ನಾಟಕ ನಮ್ಮದು, ಯಾವ ಬಿಜೆಪಿ, ಹಿಂದೂ ಸಂಘಟನೆಗಳ ಸ್ವತ್ತಲ್ಲ ಎಂದು ಹೇಳಿದ್ದರು.