ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆಯರಿಂದಲೇ ಬಾಡಿ ಮಸಾಜ್ ಮಾಡಿಸಿಕೊಂಡಿದ್ದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಬಿಹಾರದಲ್ಲಿ ಈ ಘಟನೆ ನಡೆದಿದ್ದು, ಬಾಡಿ ಮಸಾಜ್ ಮಾಡಿಸಿಕೊಂಡ ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಬಿಹಾರದ ಸಹರ್ಸಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ನೌಹಟ್ಟಾ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಶಶಿಭೂಷಣ ಸಿನ್ಹಾ ಅವರನ್ನು ಅಮಾನತು ಮಾಡಲಾಗಿದೆ.
ಶಿಶಿಭೂಷಣ್ ಅವರು ಮಹಿಳೆಯಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಶಶಿಭೂಷಣ ಸಿನ್ಹಾ ಅವರು ಶರ್ಟ್ ಇಲ್ಲದೆ ಮಹಿಳೆಯರಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದು ಫೋನ್ನಲ್ಲಿ ಮಾತನಾಡುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
ಮೂಲಗಳ ಪ್ರಕಾರ ನೌಹಟ್ಟಾ ಠಾಣೆಯ ಔಟ್ಪೋಸ್ಟ್ನಲ್ಲಿರುವ ವಸತಿ ಗೃಹದಲ್ಲಿ ವೀಡಿಯೊವನ್ನು ಚಿತ್ರೀಕರಿಸಲಾಗಿದೆ. ಈ ವೀಡಿಯೊ ವೈರಲ್ ಆದ ಬೆನ್ನಲ್ಲೇ ಸಹರ್ಸಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಿಪಿ ಸಿಂಗ್, ಶಶಿಭೂಷಣ ಸಿನ್ಹಾ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.