ಬಿಬಿಎಂಪಿ ಚುನಾವಣೆ (BBMP Election) ನಡೆಸಲು ಇಂದು ಶುಕ್ರವಾರ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ್ದು, ಡಿ. 31 ರ ಒಳಗಾಗಿ ಚುನಾವಣೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಬಿಬಿಎಂಪಿ ಕ್ಷೇತ್ರವಾರು ಮೀಸಲಾತಿ ಬಗ್ಗೆ ನಡೆದ ವಿಚಾರಣೆಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಈ ಸೂಚನೆ ನೀಡಿದೆ. ನಾಲ್ಕು ತಿಂಗಳ ಕಾಲಾವಕಾಶ ಕೇಳಿದ್ದ ಸರ್ಕಾರದ ನಿರ್ಧಾರವನ್ನು ತಿರಸ್ಕರಿಸಿದ ಕೋರ್ಟ್. ಡಿಸೆಂಬರ್ ಅಂತ್ಯದ ವೇಳೆಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿದೆ.
ಇದನ್ನೂ ಓದಿ : BIG BREAKING: ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸಿ ಆದೇಶ – ಮತದಾರರ ಪಟ್ಟಿ ತಯಾರಿಗೆ ಸೂಚನೆ
ಮುಂದಿನ ಎರಡು ತಿಂಗಳ ಒಳಗಾಗಿ, ನವೆಂಬರ್ 30 ರಂದು ಮೀಸಲಾತಿ ಪಟ್ಟಿ ಪರಿಶೀಲನೆ ಮಾಡಿ ಬಿಡುಗಡೆ ಮಾಡಬೇಕು. 30 ದಿನಗಳ ಒಳಗಾಗಿ ಚುನಾವಣಾ ಪ್ರಕ್ರಿಯೆ ನಡೆಸಬೇಕು. ಈ ವರ್ಷಾಂಥ್ಯದ ವೇಳೆಗೆ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ.
ಇದುವರೆಗೂ ರಾಜ್ಯ ಸರ್ಕಾರ ಬಿಬಿಎಂಪಿ ಚುನಾವಣೆನ್ನು (BBMP Election) ಮುಂದೂಡುತ್ತಲೇ ಬಂದಿತ್ತು. ಇದೀಗ, ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ಸೂಚನೆ ನೀಡಿದೆ. ಮುಂದಿನ ವಿದಾನಸಭಾ ಚುನಾವಣೆ ಮಾರ್ಚ್ ಅಥವಾ ಏಪ್ರೀಲ್ ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಲಿ ಬಿಬಿಎಂಪಿ ಚುನಾವಣೆ ಬೆಂಗಳೂರು ನಗರ ಮತ್ತು ಬೆ.ಗ್ರಾಮಾಂತರ ವಿದಾನಸಭಾ ಕ್ಷೇತ್ರಗಳಿಗೆ ದಿಕ್ಸೂಚಿಯಾಗಲಿವೆ.