ವಿಧಾನಪರಿಷತ್ ಮತ್ತು ರಾಜ್ಯಸಭಾ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಾಡಿದ ಯಡವಟ್ಟಿನ ಫಲಿತಾಂಶಗಳು ಹೊರಬೀಳಲು ಶುರುವಾಗಿದೆ. ಕಾಂಗ್ರೆಸ್ ವಕ್ತಾರರೂ ಆಗಿರುವ ಹಿರಿಯ ವಕೀಲ ಬ್ರಿಜೇಶ್ ಕಾಳಪ್ಪ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಅವರು,
`2013ರಿಂದ ಪಕ್ಷದ ಪರವಾಗಿ ಕನ್ನಡ, ಹಿಂದಿ, ಇಂಗ್ಲೀಷ್ ಚಾನೆಲ್ಗಳಲ್ಲಿ 6,497 ಚರ್ಚೆಗಳಲ್ಲಿ ಪಾಲ್ಗೊಂಡಿದ್ದೇನೆ. 2014 ಮತ್ತು 20189ರ ಚುನಾವಣೆಯಲ್ಲಿ ಪಕ್ಷದ ಹೀನಾಯ ಪ್ರದರ್ಶನದ ಬಳಿಕವೂ ನಾನು ಉತ್ಸಾಹ ಕಳೆದುಕೊಂಡಿರಲಿಲ್ಲ’ ಎಂದು ರಾಜೀನಾಮೆ ಪತ್ರದಲ್ಲಿ ಹೇಳಿರುವ ಕಾಳಪ್ಪ, ` ಆದರೆ ಈಗ ನನಗೆ ಪಕ್ಷದ ಚಟುವಟಿಕೆಯಲ್ಲಿ ಆಸಕ್ತಿ ಕಡಿಮೆ ಆಗಿದೆ’ ಎಂದು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿರುವುದಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬ್ರಿಜೇಶ್ ಕಾಳಪ್ಪ ಅವರು ರಾಜ್ಯ ಸರ್ಕಾರಕ್ಕೆ ಕಾನೂನು ಸಲಹೆಗಾರರಾಗಿದ್ದರು.