ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ಬೆಂಗಳುರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಬೆಳಗಾವಿ ಪ್ರವಾಸ ಹಮ್ಮಿಕೊಂಡಿರುವ ಬಿಎಸ್ ಯಡಿಯೂರಪ್ಪನವರು ಮತ್ತು ಸಿದ್ದರಾಮಯ್ಯನವರು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿ ವಿಐಪಿ ಲಾಂಜ್ನಲ್ಲಿ ಬಿಡುವಿನ ವೇಳೆ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ.