ಬುದ್ಧ ಪೂರ್ಣಿಮೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಸೋಮವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ಮತ್ತು ಹತ್ಯೆಯನ್ನು ನಿಷೇಧಿಸಿದೆ.
ಈ ಕುರಿತು ಬಿಬಿಎಂಪಿ ಭಾನುವಾರ ಪ್ರಕಟಣೆ ಹೊರಡಿಸಿದ್ದು, ನಾಳೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ವಧೆ ನಿಷೇಧಿಸಲಾಗಿದೆ. ಮಾಂಸ ಮಾರಾಟ ಮತ್ತು ಪ್ರಾಣಿ ವಧೆ ಮಾಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದೆ.
ಈ ಹಿಂದೆ ಬಿಬಿಎಂಪಿ ರಾಮನವಮಿ ಸಂದರ್ಭದಲ್ಲೂ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿತ್ತು.