ಖಾಸಗಿ ಶಾಲೆಗಳಂತೆ ಸರ್ಕಾರಿ ಶಾಲೆಗಳಿಗೆ ಬರುವ ಮಕ್ಕಳಿಗಾಗಿ ಶಾಲಾ ಬಸ್ ಖರೀದಿಸಲು ಸರ್ಕಾರ ನಿರ್ಧರಿಸಿದೆ.
ಸರ್ಕಾರ ಮಕ್ಕಳಿಗಾಗಿ ಶಾಲಾ ಬಸ್ ಖರೀದಿಸಲು ಶಾಸಕರ ಪ್ರದೇಶಾಭಿವೃದ್ಧಿ ಅನುದಾನ ಬಳಕೆ ಮಾಡಲು ಅನುಮತಿ ನೀಡಿದೆ.
ಶಾಲೆಗಳಿಂದ ದೂರ ವಾಸಿಸುವ ಮಕ್ಕಳನ್ನು ಶಾಲೆಗೆ ಕರೆತರಲು ಮತ್ತು ಮಕ್ಕಳನ್ನು ಬಿಟ್ಟು ಬರಲು ಈ ವಾಹನಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ಸರ್ಕಾರ ಹೊರಡಿಸಿದ ಅಧಿಸೂಚನೆಯಲ್ಲಿ ಹೇಳಲಾಗಿದೆ.
ಚಾಲಕರ ವೇತನ, ಡೀಸೆಲ್ ಖರೀದಿಗೆ ಈ ಹಣ ಬಳಕೆಗೆ ಸರ್ಕಾರ ಕೂಡ ಒಪ್ಪಿಗೆ ಸೂಚಿಸಿದೆ. ರಾಜ್ಯದಲ್ಲಿ ಒಟ್ಟು 48,285 ಶಾಲೆಗಳು ಹಾಗೂ 6,312 ಅನುದಾನಿತ ಶಾಲೆಗಳಿದ್ದು ಸುಮಾರು 65 ಲಕ್ಷ ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.