ಭ್ರಷ್ಟಾಚಾರ ನಿರ್ಮೂಲನಾ ಅಭಿಯಾನದ ಭಾಗವಾಗಿ ಎಲ್ಲಾ ಅಧಿಕಾರಿಗಳು ‘ನನಗೆ ಯಾರು ಲಂಚ ಕೊಡಬೇಕಾಗಿಲ್ಲ ನಾನು ಭ್ರಷ್ಟ ಅಧಿಕಾರಿಯಾಗಲಾರೆ’ ಎಂಬ ನಾಮ ಫಲಕವನ್ನು ಕಚೇರಿಗಳಲ್ಲಿ ಅಳವಡಿಸಬೇಕೆಂದು ಸರ್ಕಾರ ಆದೇಶ ಮಾಡಿದೆ.
ಸಿಟಿಜನ್ ಎನ್ಕ್ವೈರಿ ಕೌನ್ಸಿಲ್ ಮತ್ತು ಸಿಇಸಿ ಟ್ರಸ್ಟ್ ಇದೇ ಅಕ್ಟೋಬರ್ 2 ರಿಂದ 20 ರ ವರೆಗೆ ಭ್ರಷ್ಟಾಚಾರ ನಿರ್ಮೂಲನಾ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಅಭಿಯಾನದ ಭಾಗವಾಗಿ ನನಗೆ ಯಾರು ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ನಾಮಫಲಕವನ್ನು ಮಾಡಿಸಿದೆ.
ಈ ನಾಮಫಲಕಗಳನ್ನು ಸರ್ಕಾರಿ ಕಚೇರಿಗಳಲ್ಲಿ ಅಳವಡಿಸಿಕೊಳ್ಳಲು ಸಿಇಟಿ ಟ್ರಸ್ಟ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ವಿನಂತಿಸಿಕೊಂಡಿತ್ತು.
ಈ ಪತ್ರಕ್ಕೆ ಅನಮತಿ ನೀಡಿರುವ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಂ.ಮಂಜುನಾಥ್ ಅವರು ಸಂಸ್ಥೆ ನೀಡಿದ ನಾಮಫಲಕಗಳನ್ನು ಹಾಕಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ : Paycm Poster Protest : ಕಾಂಗ್ರೆಸ್ನಿಂದ ಪೇಸಿಎಂ ಪೋಸ್ಟರ್ ಅಂಟಿಸಿ ಪ್ರತಿಭಟನೆ – ಬಂಧನ