ಕೇಂದ್ರದ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಗೆ ವಿರೋಧ ಪಕ್ಷಗಖ ಮತಾದಾರರಷ್ಟೇ ಅಲ್ಲದೇ, ಬಿಜೆಪಿಯ ಮತದಾರರು ನಲುಗಿ ಹೋಗುತ್ತಿದ್ದಾರೆ. ಬಡವರ ನೆರವಿಗೆ ಬರಬೇಕಾಗಿರುವ ಸರ್ಕಾರ ಅವರನ್ನು ಉಪವಾಸ ಬೀಳಿಸಿ ಸಾಯಿಸಲು ಹೊರಟಿದೆ. ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ.
ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಬಡವರ ಹತ್ಯೆಗೆ ಸಮನಾದ ಪಾಪ ಕರ್ಮವಾಗಿದೆ. ಆ ಮೂಲಕ ಇದು ಸೂಟ್ ಬೂಟ್ ಸರ್ಕಾರದ ಎಂಬುದು ಸಾಬೀತಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಡವರ ಹೊಟ್ಟೆಗೆ ಒದೆಯುವುದೇ ಅಚ್ಚೇ ದಿನ್ ಎಂದು ತಿಳಿದುಕೊಂಡಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಊಟದ ತಟ್ಟೆಯಲ್ಲಿನ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಬಡವರ ಹತ್ಯೆಗೆ ಸಮನಾದ ಪಾಪ ಕರ್ಮ.
ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ತರಕಾರಿ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿದಿದೆ. ಈ ಹೊತ್ತಿನಲ್ಲಿ ಬಡವರ ನೆರವಿಗೆ ಬರಬೇಕಾಗಿರುವ ಸರ್ಕಾರ ಅವರನ್ನು ಉಪವಾಸ ಬೀಳಿಸಿ ಸಾಯಿಸಲು ಹೊರಟಿದೆ. ಇಂತಹ ಕ್ರೌರ್ಯ ಫ್ಯಾಸಿಸ್ಟ್ ಮನಸ್ಸುಗಳಿಂದ ಮಾತ್ರ ಸಾಧ್ಯ ಎಂದಿದ್ದಾರೆ.
ಬ್ರ್ಯಾಂಡೆಡ್ ಅಲ್ಲದ ಪ್ಯಾಕ್ ಮಾಡಲಾಗಿರುವ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ವಸ್ತುಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ GST ಹೇರಿರುವುದು ಬ್ರ್ಯಾಂಡೆಡ್ ವಸ್ತುಗಳ ಕಂಪೆನಿಗಳ ಒತ್ತಡಕ್ಕೆ ಮಣಿದು ಎನ್ನುವುದು ಸ್ಪಷ್ಟ. ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ಮತ್ತೆ ಮತ್ತೆ ಅವರು ಸಾಬೀತುಪಡಿಸುತ್ತಿದ್ದಾರೆ.
ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ.
ಕೇಂದ್ರ ಬಿಜೆಪಿಸರ್ಕಾರದ ಈ ‘ತೆರಿಗೆ ಭಯೋತ್ಪಾದನೆಗೆ ಬಲಿಯಾಗಿರುವುದು ವಿರೋಧಪಕ್ಷಗಳ ಮತದಾರರು ಮಾತ್ರವಲ್ಲ, ಅಚ್ಚೇ ದಿನಗಳ ನಿರೀಕ್ಷೆಯಿಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿದ್ದ ಬಿಜೆಪಿಯ ಮತದಾರರಿಗೂ ಇದರಲ್ಲಿ ರಿಯಾಯಿತಿ-ವಿನಾಯಿತಿ ಏನಿಲ್ಲ. ಅವರು ಕೂಡಾ ಇದಕ್ಕೆ ಬಲಿಯಾಗಿದ್ದಾರೆ. ಬಡತನ ಜಾತಿ, ಧರ್ಮ, ಪಕ್ಷಗಳೆಲ್ಲವನ್ನೂ ಮೀರಿದ್ದು
ಬ್ರ್ಯಾಂಡ್ ಗಳ ಬೆನ್ನತ್ತಿ ಹೋಗುತ್ತಿರುವ ಉಳ್ಳವರು, ಶ್ರೀಮಂತರು ಖರೀದಿಸುವ ವಸ್ತುಗಳ ಮೇಲೆ ತೆರಿಗೆ ಹೇರಿಕೆಗೆ ಕನಿಷ್ಠ ಸಮರ್ಥನೆ ಇದೆ. ಆದರೆ ಗುಡಿಕೈಗಾರಿಕೆಗಳ ರೂಪದಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಲಕ್ಷಾಂತರ ಕಿರು ಉದ್ಯಮಿಗಳಿಗೂ ಕೂಡಾ ಇದೊಂದು ದೊಡ್ಡ ಹೊಡೆತ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾವು-ಬದುಕಿನ ಪ್ರಶ್ನೆಯನ್ನು ದೇಶದ ಜನರ ಮುಂದಿಟ್ಟಿದೆ, ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಅನಾಚಾರಗಳನ್ನೆಲ್ಲ ಸಹಿಸಿಕೊಂಡು ಇನ್ನೂ ಅಚ್ಚೇ ದಿನಗಳ ಕನಸು ಕಂಡರೆ ಬದುಕಿನ ನಾಶ ಖಂಡಿತ.
ಕಾಲ ಮಿರಿಹೋಗುತ್ತಿದೆ, ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.