ADVERTISEMENT
ನಟ ದರ್ಶನ್ ಮೇಲೆ ಬಂದಿರುವ ಕೊಲೆ ಆರೋಪ ಕಳವಳಕಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಚಿತ್ರದುರ್ಗದ ಯುವಕ ರೇಣುಕಾಸ್ವಾಮಿಯನ್ನು ಬರ್ಬರವಾಗಿ ಹತ್ಯೆಗೈಯ್ದಿರುವ ಪ್ರಕರಣ ಅತ್ಯಂತ ಅಮಾನವೀಯ ಹಾಗೂ ಖಂಡನೀಯ.ನಟ ದರ್ಶನ್ ಸೇರಿದಂತೆ ಇತರರ ಮೇಲೆ ಬಂದಿರುವ ಆರೋಪ ಅತ್ಯಂತ ಕಳವಳಕಾರಿ ಘಟನೆಯಾಗಿದೆ.ಸರ್ಕಾರ ಯಾವುದೇ ಮುಲಾಜಿಗೂ ಈಡಾಗದೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗುವಂತೆ ತನಿಖೆಯನ್ನು ಬಿಗಿಗೊಳಿಸಲಿ.ಮೃತ ರೇಣುಕಾಸ್ವಾಮಿ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ರೇಣುಕಾ ಸ್ವಾಮಿ ಸಾವಿಗೆ ನ್ಯಾಯ ಸಿಗುವಂತಾಗಲಿ.
ಎಂದು ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.
ಜೂನ್ 11ರಂದು ಬೆಳಗ್ಗೆ ನಟ ದರ್ಶನ್, ದರ್ಶನ್ 2ನೇ ಪತ್ನಿ ಪವಿತ್ರಾ ಗೌಡ ಮತ್ತು ಇತರೆ ಆರೋಪಿಗಳನ್ನು ಬಂಧಿಸಲಾಗಿತ್ತು. ಇದಾದ ಒಂದೂವರೆ ದಿನದ ಬಳಿಕ ವಿಜಯೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ADVERTISEMENT