ವಿದ್ಯಾರ್ಥಿನಿಯೊಬ್ಬರು ತನ್ನ ಹಾಸ್ಟೆಲ್ ಸಹಪಾಠಿಗಳ ಖಾಸಗಿ ವಿಡಿಯೊಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಿದ್ದಾರೆ ಎಂದು ಆರೋಪಿಸಿ ಪಂಜಾಬ್ನ ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದಲ್ಲಿ (Chandigarh University) ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ವಿಡಿಯೋ ಲೀಕ್ ಮಾಡಿದ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ.
ಹಾಸ್ಟೆಲ್ನಲ್ಲಿ ಯುವತಿಯರು ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡಿ ಆನ್ಲೈನ್ನಲ್ಲಿ ಸೋರಿಕೆ ಮಾಡಿದ್ದಾರೆ. ಈ ಬೆನ್ನಲ್ಲೇ, ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ವಿಶ್ವವಿದ್ಯಾಲಯದ (Chandigarh University) ಆಡಳಿತವು ಪ್ರತಿಭಟನೆಯನ್ನು ಹತ್ತಿಕ್ಕಲು, ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿನಿಯರು ಆರೋಪ ಮಾಡಿದ್ದಾರೆ. ಇದನ್ನೂ ಓದಿ : Maharastra : ಮಕ್ಕಳ ಕಳ್ಳರೆಂದು ಭಾವಿಸಿ ಸಾಧುಗಳ ಮೇಲೆ ಹಲ್ಲೆ – ವಿಡಿಯೋ ವೈರಲ್
ಇದು ಹಾಸ್ಟೆಲ್ನ ವಿದ್ಯಾರ್ಥಿನಿಯೊಬ್ಬರು ಮತ್ತೊಬ್ಬ ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಿಸಿ, ಆನ್ಲೈನ್ನಲ್ಲಿ ಹಂಚಿಕೊಂಡ ವಿಡಿಯೋಗೆ ಸಂಬಂಧಿಸಿದ ವಿವಾದವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಸಾಕ್ಷ್ಯಗಳನ್ನು ಸಂಗ್ರಹಿಸಲಾಗುತ್ತಿದೆ. ಇಲ್ಲಿಯವರೆಗೆ ಆತ್ಮಹತ್ಯೆಯ ಯಾವುದೇ ಪ್ರಯತ್ನ ವರದಿಯಾಗಿಲ್ಲ. ವಿದ್ಯಾರ್ಥಿಗಳ ವೈದ್ಯಕೀಯ ದಾಖಲೆಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಜನರು ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅವರು ಹೇಳಿದ್ದಾರೆ.
I humbly request all the students of Chandigarh University to remain calm, no one guilty will be spared.
It’s a very sensitive matter & relates to dignity of our sisters & daughters.
We all including media should be very very cautious,it is also test of ours now as a society.
— Harjot Singh Bains (@harjotbains) September 18, 2022
ಪಂಜಾಬ್ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಮಾತನಾಡಿ, ಇದು ತುಂಬಾ ಸೂಕ್ಷ್ಮ ವಿಷಯ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಶಾಂತವಾಗಿರಬೇಕು. ಮಾಧ್ಯಮಗಳೂ ಸಂಯಮದಿಂದ ವರ್ತಿಸಬೇಕು ಎಂದು ಮನವಿ ಮಾಡಿದರು. ತಪ್ಪು ಮಾಡಿದವರನ್ನು ರಕ್ಷಿಸುವ ಪ್ರಯತ್ನ ನಾನು ಮಾಡುವುದಿಲ್ಲ. ಇದು ನಮ್ಮ ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿದ ಸೂಕ್ಷ್ಮ ವಿಷಯವಾಗಿದೆ. ಒಂದು ಸಮಾಜವಾಗಿ ಇದು ನಮ್ಮ ಪರೀಕ್ಷೆಯಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ : ನೃತ್ಯ ಮಾಡುತ್ತಲೇ ಸಾವನ್ನಪ್ಪಿದ ಪಾರ್ವತಿ ವೇಷಧಾರಿ ಕಲಾವಿದ – ವಿಡಿಯೋ ವೈರಲ್