ಕರ್ನಾಟಕ ವಿಧಾನಸಭಾ ಚುನಾವಣೆ ಹೊತ್ತಲ್ಲಿ ಜಿಲ್ಲಾವಾರು ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ವಿಧಾನಸಭಾ ಕ್ಷೇತ್ರಗಳಿವೆ.
2018ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 1 ಮತ್ತು ಉಳಿದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿತ್ತು.
ಶೃಂಗೇರಿಯಲ್ಲಿ ಮಾತ್ರ ಶಾಸಕ ರಾಜೇಗೌಡ ಗೆದ್ದಿದ್ದರೆ, ಚಿಕ್ಕಮಗಳೂರು, ಕಡೂರು, ತರೀಕೆರೆ, ಮೂಡಿಗೆರೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು.
ಈ ಬಾರಿ ಹೇಗಿದೆ ಲೆಕ್ಕಾಚಾರ..?
ಗುರುರಾಜ್ ಅಂಜನ್ ಅವರು ನಡೆಸಿರುವ ಚುನಾವಣಾ ಸಮೀಕ್ಷೆಯ ಪ್ರಕಾರ:
ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಪೈಕಿ ಕಾಂಗ್ರೆಸ್ ಮೂರು ಮತ್ತು ಬಿಜೆಪಿ ಎರಡು ಕ್ಷೇತ್ರಗಳಲ್ಲಿ ಗೆಲ್ಲಲಿದೆ.
ಕಾಂಗ್ರೆಸ್ 2 ಸ್ಥಾನಗಳು ಲಾಭ ಆಗಲಿದ್ದು, ಬಿಜೆಪಿ ಎರಡು ಸ್ಥಾನಗಳನ್ನು ಕಳೆದುಕೊಳ್ಳಲಿದೆ.
ಯಾವ ಕ್ಷೇತ್ರ ಯಾವ ಪಕ್ಷ ಗೆಲ್ಲಬಹುದು..?
ಇವರ ಅಂದಾಜಿನ ಪ್ರಕಾರ ಮೂಡಿಗೆರೆ ಎಸ್ಸಿ ಮೀಸಲು ಕ್ಷೇತ್ರ, ಶೃಂಗೇರಿ ಮತ್ತು ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಬಹುದು ಎಂದು ಅಂದಾಜಿಸಿದ್ದಾರೆ.
ಚಿಕ್ಕಮಗಳೂರು ಮತ್ತು ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿಯೇ ಗೆಲ್ಲಬಹುದು ಎಂದು ಗುರುರಾಜ್ ಅಂಜನ್ ಅಂದಾಜಿಸಿದ್ದಾರೆ.
ADVERTISEMENT
ADVERTISEMENT