ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಭೇಟಿ ನೀಡಿದ ಹಿನ್ನೆಲ್ಲೆಯಲ್ಲಿ, ಕೇವಲ ಅವರ 4 ತಾಸಿನ ಭೇಟಿಗೆ ಒಂದು ವಾರಗಳಲ್ಲಿಯೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 24 ಕೋ.ರೂ ಖರ್ಚು ಮಾಡಿ ರಸ್ತೆ ನಿರ್ಮಾಣ ಮಾಡಿತ್ತು. ಇತ್ತ, 30 ಲಕ್ಷ ಖರ್ಚು ಮಾಡಿ ನಿರ್ಮಿಸಿದ ಸೇತುವೆ ಒಂದೇ ವಾರದಲ್ಲಿ ಕುಸಿದು ಬಿದ್ದಿದೆ.
ಚಿಕ್ಕಮಂಗಳೂರು ಜಿಲ್ಲೆಯ ಕಳಸದಲ್ಲಿ ಬರೋಬ್ಬರಿ 30 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಕೇವಲ ಒಂದು ವಾರದಲ್ಲಿಯೇ ಕುಸಿದು ಬಿದ್ದಿದೆ.
ಸರ್ಕಾರದ ಈ ಕಳಪೆ ಕಾಮಗಾರಿಯ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.