ADVERTISEMENT
ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಇದೇ ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಾರಾಂತ್ಯದಲ್ಲಿ ಅಂದರೆ ನವೆಂಬರ್ 9ರ ಶನಿವಾರ, ನವೆಂಬರ್ 10ರ ಭಾನುವಾರ ಬಾಬಾ ಬುಡನ್ಗಿರಿಗೆ ಪ್ರವಾಸಿಗರಿಗೆ ಪ್ರವೇಶ ಇರಲ್ಲ.
ಚಂದ್ರದ್ರೋಣ ಪರ್ವತ ಸಾಲಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಮತ್ತು ಗಾಳಿಕೆರೆ ಸೇರಿದಂತೆ ಸುತ್ತಮುತ್ತಲಿನ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುವುದನ್ನು ನವೆಂಬರ್ 9ರ ಬೆಳಗ್ಗೆ 6 ಗಂಟೆಯಿAದ ನವೆಂಬರ್ 11ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಿಸಲಾಗಿದೆ.
ನವೆಂಬರ್ 4ರಿಂದ ನವೆಂಬರ್ 11ರವರೆಗೆ ಶ್ರೀರಾಮಸೇನೆ ದತ್ತಮಾಲಾ ಅಭಿಯಾನ ಕೈಗೊಂಡಿದೆ. ಹೀಗಾಗಿ ದತ್ತಪೀಠಕ್ಕೆ ಚಿಕ್ಕಮಗಳೂರು ಮತ್ತು ಉಳಿದ ಜಿಲ್ಲೆಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಬಾಬಾ ಬುಡನ್ಗಿರಿ ಸಂಪರ್ಕಿಸುವ ರಸ್ತೆಗಳು ಕಿರಿದಾಗಿದ್ದು ಮತ್ತು ಮಳೆಯ ಕಾರಣದಿಂದ ರಸ್ತೆಗಳು ಹಾಳಾಗಿದ್ದು, ಭೂಕುಸಿತ ಉಂಟಾಗಿದೆ. ಇದರಿಂದ ವಾಹನ ದಟ್ಟಣೆ ಮತ್ತು ಜನಸಂದಣಿಯಿAದ ಅನಾನೂಕೂಲ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ADVERTISEMENT