ಬೆಂಗಳೂರು: ಸ್ಯಾಂಡಲ್ವುಡ್ ನಟಿ ರಮ್ಯಾ (Actress Ramya) ನಿರ್ಮಾಣದ ಚೊಚ್ಚಲ ಸಿನಿಮಾ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಥಿಯೇಟರ್ಗಳಲ್ಲಿ ಅಷ್ಟಾಗಿ ಸದ್ದು ಮಾಡಲಿಲ್ಲ. ಇದೀಗ ಈ ಸಿನಿಮಾ ಒಟಿಟಿ ಎಂಟ್ರಿಗೆ ಸಿದ್ಧವಾಗಿದ್ದು, ಡಿಸೆಂಬರ್ 29ಕ್ಕೆ ಅಮೆಜಾನ್ ಪ್ರೈಂನಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ.
ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಲಗ್ಗೆ ಇಟ್ಟಿದ್ದು, ಆ್ಯಪಲ್ ಬಾಕ್ಸ್ ಸ್ಟುಡಿಯೋನಡಿ ರಮ್ಯಾ ನಿರ್ಮಿಸಿರುವ ಈ ಚಿತ್ರಕ್ಕೆ ನಟ, ನಿರ್ದೇಶಕ ರಾಜ್ ಬಿ. ಶೆಟ್ಟಿ ಆ್ಯಕ್ಷನ್ ಕಟ್ ಹೇಳಿದರು.
ಇದರಲ್ಲಿ ರಾಜ್ ಬಿ. ಶೆಟ್ಟಿ ಮತ್ತು ಸಿರಿ ರವಿಕುಮಾರ್ ಮೊದಲ ಬಾರಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದರು. ʼಒಂದು ಮೊಟ್ಟೆಯ ಕಥೆʼ, ʻಗರುಡ ಗಮನ ವೃಷಭ ವಾಹನʼ ಚಿತ್ರಗಳ ನಂತರ ರಾಜ್ ಬಿ. ಶೆಟ್ಟಿ ಈ ಸಿನಿಮಾ ನಿರ್ದೇಶಿಸಿದ್ದರು.
ಆರಂಭದಲ್ಲಿ ಈ ಚಿತ್ರದ ಮೂಲಕ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಾರೆ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ನಟನೆಯಿಂದ ಹಿಂದೆ ಸರಿದು ಕೇವಲ ನಿರ್ಮಾಪಕಿಯಾಗಿ ಮುಂದುವರಿದಿದ್ದರು. ಅವರ ಜಾಗಕ್ಕೆ ಸಿರಿ ರವಿಕುಮಾರ್ ಎಂಟ್ರಿಯಾಗಿತ್ತು.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಕಥೆ ಏನು ಎಂದು ನೋಡುವುದಾದರೆ ‘ಆಸರೆ’ ಎನ್ನುವ ಹಾಸ್ಪೈಸ್ನಲ್ಲಿ(ಗುಣವಾಗದ ಕಾಯಿಲೆಯಿಂದ ಬಳಲುವವರನ್ನು ನೋಡಿಕೊಳ್ಳುವ ಕೇಂದ್ರ) ಪ್ರೇರಣಾ ಸಲಹೆಗಾರ್ತಿಯಾಗಿ ಕೆಲಸ ಮಾಡುತ್ತಿರುತ್ತಾಳೆ. ಅನಿಕೇತ್ ಬಂದು , ಅದಾಗಲೇ ಮದುವೆ ಆಗಿರುವ ಪ್ರೇರಣಾ ಜೀವನದಲ್ಲಿ ಆಗುವ ಬದಲಾವಣೆಯ ಕಥೆ ಚಿತ್ರದಲ್ಲಿದೆ. ಅಮೆಜಾನ್ ಸಂಸ್ಥೆ ಇತ್ತೀಚೆಗೆ ಕನ್ನಡ ಸಿನಿಮಾಗಳನ್ನು ಅಷ್ಟಾಗಿ ಕೊಂಡುಕೊಳ್ಳುತ್ತಿಲ್ಲ. ಬಹಳ ಹಿಂದೆಯೇ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಒಟಿಟಿ ಸ್ಟ್ರೀಮಿಂಗ್ ಒಪ್ಪಂದವಾಗಿತ್ತು ಎನ್ನಲಾಗಿದೆ.
ಬಾಲಾಜಿ ಮನೋಹರ್, ಸೂರ್ಯ ವಶಿಷ್ಟ, ರೇಖಾ ಕುಡ್ಲಿಗಿ, ಸ್ನೇಹಾ ಶರ್ಮಾ, ಜೆ.ಪಿ.ತುಮ್ಮಿನಾಡು, ಗೋಪಾಲಕೃಷ್ಣ ದೇಶ್ಪಾಂಡೆ ʻಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಮಿಧುನ್ ಮುಕುಂದನ್ ಸಂಗೀತ ಸಂಯೋಜಿಸಿದ್ದಾರೆ.