ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavarj Bommai) ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಹೊಳಿಮಠ (Gurulingaswamy) ನಿಧನರಾಗಿದ್ದಾರೆ. ಇವರಿಗೆ 45 ವರ್ಷ ವಯಸ್ಸಾಗಿತ್ತು.
ಇವತ್ತು ಬೆಳಗ್ಗೆ ಜಿಮ್ಗೆ ಹೋಗಿದ್ದಾಗ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದರು.
ತಕ್ಷಣವೇ ಅವರನ್ನು ನಾಗರಭಾವಿಯಲ್ಲಿರುವ ಯೂನಿಟಿ ಲೈಫ್ ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಗುರುಲಿಂಗಸ್ವಾಮಿ ಅವರು ಟಿವಿ5, ವಿಜಯವಾಣಿ, ಈಟಿವಿಯಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ಮಾಡಿದ್ದರು.
ADVERTISEMENT
ADVERTISEMENT