ಕರ್ನಾಟಕ ಸರ್ಕಾರ ಕೇಳಿದ್ದ 2 ಲಕ್ಷದ 8 ಸಾವಿರ ಮೆಟ್ರಿಕ್ ಟನ್ ಅಕ್ಕಿ ಪೂರೈಸುವುದಾಗಿ ಭಾರತೀಯ ಆಹಾರ ನಿಗಮ ಒಪ್ಪಿಕೊಂಡಿದ್ದರ ಬಗ್ಗೆ ದಾಖಲೆ ಬಹಿರಂಗಪಡಿಸುವಂತೆ ಬಿಜೆಪಿ ನಾಯಕರು ಕೇಳಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆ ಸಂಬಂಧಿತ ದಾಖಲೆ ಬಿಡುಗಡೆ ಮಾಡಿದ್ದಾರೆ.
ಜೂನ್ 12ರಂದು ಭಾರತೀಯ ಆಹಾರ ನಿಗಮ ಕರ್ನಾಟಕ ಸರ್ಕಾರಕ್ಕೆ ಆಹಾರ ಧಾನ್ಯ ಪೂರೈಸುವಂತೆ ಆಹಾರ ನಿಗಮದ ಐದು ವಲಯಗಳಾದ ಬೆಂಗಳೂರು, ರಾಯಚೂರು, ಮೈಸೂರು, ಹುಬ್ಬಳ್ಳಿ ಮತ್ತು ಶಿವಮೊಗ್ಗದ ವಿಭಾಗೀಯ ವ್ಯವಸ್ಥಾಪಕರಿಗೆ ಬರೆದಿದ್ದ ಎರಡು ಪತ್ರಗಳನ್ನು ಸಿದ್ದರಾಮಯ್ಯ ಅವರು ಮತ್ತೊಂದು ಬಹಿರಂಗಪಡಿಸಿದ್ದಾರೆ.
ಈ ಪತ್ರದ ಪತ್ರಿಗಳನ್ನು ಆಹಾರ ನಿಗಮ ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಆಹಾರ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೂ ರವಾನಿಸಲಾಗಿದೆ.
ಭಾರತೀಯ ಆಹಾರ ನಿಗಮ (ಎಫ್ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ ನಾಯಕ @CTRavi_BJP ಸವಾಲು ಹಾಕಿದ್ದರು.
ಇಲ್ಲಿದೆ ಎಫ್.ಸಿ.ಐ ಕಮಿಟ್ಮೆಂಟ್ ಪತ್ರ.
ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು.
ಸಿ.ಟಿ.ರವಿ ಮತ್ತಿತರ @BJP4Karnataka ನಾಯಕರು ಮೊದಲು ಕೇಂದ್ರ @BJP4India ಸರ್ಕಾರದ ಮೇಲೆ ಒತ್ತಡ ಹೇರಿ ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ
ಎಂದು ಸಿಎಂ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.
ADVERTISEMENT
ADVERTISEMENT