ADVERTISEMENT
ನವೆಂಬರ್ 6ರಂದು ಅಂದರೆ ನಾಳೆ ಬುಧವಾರ ವಿಚಾರಣೆಗೆ ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಯಿAದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ ಪಿ ಯೋಗೇಶ್ವರ್ ಅವರ ಪರವಾಗಿ ಪ್ರಚಾರದಲ್ಲಿ ಭಾಗಿ ಆಗಬೇಕಿತ್ತು. ಈ ಹಿಂದೆ ಬಿಡುಗಡೆ ಆಗಿದ್ದ ವೇಳಾಪಟ್ಟಿ ಪ್ರಕಾರ ನಾಳೆ ಬೆಳಗ್ಗೆ 11 ಗಂಟೆಯಿAದ ಚಿಕ್ಕೇನಹಳ್ಳಿ, ಮಧ್ಯಾಹ್ನ 12 ಗಂಟೆ 15 ನಿಮಿಷಕ್ಕೆ ಕುಂಬಾರಕಟ್ಟೆ ಸರ್ಕಲ್ನಲ್ಲಿ ಪ್ರಚಾರದಲ್ಲಿ ಭಾಗಿ ಆಗ್ಬೇಕಿತ್ತು.
ಆದರೆ ಮುಖ್ಯಮಂತ್ರಿಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಾರ ನಾಳೆ ಕಾರ್ಯಕ್ರಮಗಳಲ್ಲಿ ಬದಲಾವಣೆ ಆಗಿದೆ. ನಾಳೆ ಬೆಳಗ್ಗೆ 7.30ಕ್ಕೆ ಬೆಂಗಳೂರಿನಿAದ ರಸ್ತೆ ಮಾರ್ಗವಾಗಿ ಮೈಸೂರಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಬೆಳಗ್ಗೆ 9.30ಕ್ಕೆ ಮೈಸೂರು ತಲುಪಲಿದ್ದಾರೆ.
ಆ ಬಳಿಕ ಮಧ್ಯಾಹ್ನ 12 ಗಂಟೆಗೆ ಮೈಸೂರಿನಿಂದ ಚನ್ನಪಟ್ಟಣದಲ್ಲಿ ಪ್ರಚಾರಕ್ಕಾಗಿ ನಿರ್ಗಮಿಸಲಿದ್ದಾರೆ. ಬೆಳಗ್ಗೆ 9 ಗಂಟೆ 30 ನಿಮಿಷದಿಂದ ಮಧ್ಯಾಹ್ನ 12 ಗಂಟೆವರೆಗೆ ಅಂದರೆ 2 ಗಂಟೆ 30 ನಿಮಿಷವನ್ನು ಕಾಯ್ದಿರಿಸಲಾಗಿದೆ.
ಅಂದರೆ ನಾಳೆ ಬೆಳಗ್ಗೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾಯುಕ್ತ ವಿಚಾರಣೆಗೆ ಹಾಜರಾಗಲಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ತಮ್ಮ ಪತ್ನಿ ಪಾರ್ವತಿ ಅವರಿಗೆ 14 ನಿವೇಶನಗಳನ್ನು ಮಂಜೂರು ಮಾಡಿದ್ದರ ಹಿಂದೆ ತಮ್ಮ ಪಾತ್ರವಿದೆ ಎಂಬ ಆರೋಪಗಳ ಬಗ್ಗೆ ತನಿಖಾಧಿಕಾರಿ ಎದುರು ವಿವರಣೆ ನೀಡಲಿದ್ದಾರೆ.
ಅಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದಲ್ಲಿ ಎದುರಿಸ್ತಿರುವ ಮೊದಲ ವಿಚಾರಣೆ ಇದಾಗಲಿದೆ.
ADVERTISEMENT