ಸರ್ಕಾರದ ವಿವಿಧ ಯೋಜನೆಗಳಿಗೆ ಸಹಾಯಕಾರಿಯಾಗಲಿರುವ ಪ್ರಗತಿ ಮೊಬೈಲ್ ಅಪ್ಲಿಕೇಶನ್ ಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.
ಇಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದಲ್ಲಿ ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಕ್ಷೇತ್ರಮಟ್ಟದ ಪ್ರಗತಿ ವೀಕ್ಷಣೆಗೆ ಪೂರಕವಾಗಿ ಅಭಿವೃದ್ಧಿಯಾಗಿರುವಂತ ಈ ಪ್ರಗತಿ ಅಪ್ಲಿಕೇಶನ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಅಪ್ಲಿಕೇಶನ್ ಈಗಿರುವ ಸರ್ಕಾರದ ಹಲವು ಯೋಜನೆಗಳ ಪರಿಣಾಮ ಹಾಗೂ ಪ್ರಯೋಜನಗಳ ಬಗ್ಗೆ ಮೇಲ್ವಿಚಾರಣೆ ಮಾಡುತ್ತದೆ. ಹಾಗೂ ಯೋಜನೆಗಳಲ್ಲಿ ಆಗುತ್ತಿರುವ ಸಮಸ್ಯೆಗಳು, ಅವುಗಳನ್ನು ಪರಿಹರಿಸಲು ತೆಗೆದುಕೊಳ್ಳಬಹುದಾದ ಕ್ರಮಗಳನ್ನು ತಿಳಿಯುವ ನಿಟ್ಟಿನಲ್ಲಿ ಈ ‘ಪ್ರಗತಿ’ ಆಪ್ ಸಹಕಾರಿಯಾಗಲಿದೆ.
ಈ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್, ಮುಖ್ಯಮಂತ್ರಿಗಳ ಅಪಯ ಮುಖ್ಯ ಕಾರ್ಯದರ್ಶಿ ಅತೀಕ್ ಅಹಮದ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.