ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ.
ಈ ವಿಚಾರವನ್ನು ಸಾಮಾಜಿಕ ಜಾಲತಾಣದ ಪ್ರಕಟಣೆ ಹೊರಡಿಸಿರೋ ಸಿಎಂ ಸಿದ್ದರಾಮಯ್ಯ,
ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು “ಕನ್ನಡಿಗ”ರೇ ಎಂದು ಭಾವಿಸಿದ್ದೇವೆ.
ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.
ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ.
ಅಂತ ಕರೆ ನೀಡಿದ್ದಾರೆ.
ಇನ್ನು ಫೆ.೨೮ರೊಳಗೆ ಈ ನಿಯಮ ಪಾಲನೆ ಮಾಡದವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳೋದಾಗಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.