ADVERTISEMENT
ವಿಧಾನಸಭೆಯಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ವಿಚಾರಿಸಿದರು.
ಸ್ಪೀಕರ್ ಯು.ಟಿ.ಖಾದರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ವಿಚಾರಿಸಿದ ಯಡಿಯೂರಪ್ಪ:
ವಿಧಾನಸೌಧದಲ್ಲಿ ಇಂದು ನಡೆದ ಗದ್ದಲದ ನಡುವೆ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು. ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳುವಂತೆ ಹಾರೈಸಲಾಯಿತು
ಎಂದು ಯಡಿಯೂರಪ್ಪ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ADVERTISEMENT