ತಮ್ಮದೇ ಪಕ್ಷದ ನಾಯಕರ ವಿರುದ್ಧ ಸಾಕಷ್ಟು ಗಂಭೀರ ಆರೋಪಗಳನ್ನು ಮಾಡಿದ ಹೊರತಾಗಿಯೂ ರಾಷ್ಟ್ರೀಯ ಪಕ್ಷ ಬಿಜೆಪಿ ಯಾಕೆ ಯತ್ನಾಳ್ ಮೇಲೆ ಕ್ರಮ ಕೈಗೊಳ್ಳುತ್ತಿಲ್ಲ ಅಂತ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,ಬಿಜೆಪಿ ಶಾಸಕ ಯತ್ನಾಳ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ಬಿ.ವೈ ವಿಜಯೇಂದ್ರ ಸೇರಿದಂತೆ ಹಿಂದಿನ ಸರ್ಕಾರದ ಸಂಪುಟದಲ್ಲಿದ್ದ ಕೆಲವ ವಿರುದ್ಧ ನಿರಂತರವಾಗಿ ಭ್ರಷ್ಟಾಚಾರದ ಆರೋಪ ಮಾಡುತ್ತಾ ಬಂದಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ರಾಜ್ಯದ ಬಿಜೆಪಿ ನಾಯಕರು ಈ ಬಗ್ಗೆ ಮೌನವಾಗಿರುವುದರಲ್ಲಿ ಆಶ್ಚರ್ಯವೇನಿಲ್ಲ ಎಂದಿದ್ದಾರೆ.
ಬ್ಲಾಕ್ಮೇಲ್ ಜನತಾ ಪಾರ್ಟಿಯ ಮತ್ತೊಂದು ಬ್ಲಾಕ್ಮೇಲ್!
ಹಿಂದೆ ಬಿಜೆಪಿಯಲ್ಲಿ ಬ್ಲಾಕ್ಮೇಲ್ ಮಾಡಿ ಹುದ್ದೆ ಪಡೆಯುತ್ತಾರೆ ಇದೇ ಯತ್ನಾಳ್ ಇಂದು ಬ್ಲಾಕ್ಮೇಲ್ ಅಸ್ತ್ರ ಹೂಡಿದ್ದಾರೆ.
ಕಳ್ಳನ ಹುಳುಕು ಮತ್ತೊಬ್ಬ ಕಳ್ಳನಿಗೆ ಮಾತ್ರ ಗೊತ್ತಿರುತ್ತದೆ ಎಂಬಂತೆ ಬಿಜೆಪಿಯ ಭ್ರಷ್ಟಾಚಾರದ ಜಾತಕ ಯತ್ನಾಳ್ ಕೈಯ್ಯಲ್ಲಿದೆ.
ಯತ್ನಾಳ್ ಅದೆಷ್ಟೇ ಪಕ್ಷ ವಿರೋಧಿ ಹೇಳಿಕೆ ಕೊಟ್ಟರೂ ಕ್ರಮ ಕೈಗೊಳ್ಳುವ ಧೈರ್ಯ ತೋರದಿರುವುದು ಇದೇ ಕಾರಣಕ್ಕಾ ಅಂತ ಕರ್ನಾಟಕ ಬಿಜೆಪಿಯನ್ನು ಪ್ರಶ್ನಿಸೋ ಮೂಲಕ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.