ಸುಪ್ರೀಂಕೋರ್ಟ್ನ ಸೂಚನೆಯಂತೆ ರಾಜ್ಯದಲ್ಲಿ ದ್ವೇಷದ ಮಾತು. ಭಾಷಣಗಳ ತಡೆಯಲು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ದೇಶದಾದ್ಯಂತ ಪ್ರಮುಖವಾಗಿ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷದ ಭಾಷಣಗಳು, ಮಾತುಗಳು ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ನ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು. ಇದರಂತೆ ದ್ವೇಷದ ಮಾತುಗಳಿಗೆ ಕಡಿವಾಣ ಹಾಕಲು ಸಮಿತಿ ರಚಿಸಲಾಗುವುದು ಹೇಳಿದ್ದಾರೆ.
ಇತ್ತೀಚೆಗೆ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ನಡೆದ ಧರ್ಮ ಸಂಸದ್ನಲ್ಲಿ ಪ್ರಸಾರವಾದ ದ್ವೇಷ ಭಾಷಣಗಳ ಕುರಿತ ವಿಚಾರಣೆಯಲ್ಲಿ ಸುಪ್ರೀಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಡೆಯಿಂದ ಶೂನ್ಯ ಸಹಿಷ್ಣುತೆಗೆ ಕರೆ ನೀಡಿತ್ತು ಮತ್ತು ದ್ವೇಷದ ಮಾತುಗಳ ತಡೆಯಲು ವಿಶೇಷ ಕಾರ್ಯಪಡೆಗಳನ್ನು ರಚಿಸುವಂತೆ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ದ್ವೇಷದ ಭಾಷಣಗಳನ್ನು ಪ್ರಸಾರ ಮಾಡುವ ಸಾಧ್ಯತೆಯಿರುವ ಜನರ ಬಗ್ಗೆ ಗುಪ್ತಚರ ವರದಿಗಳನ್ನು ಸಂಗ್ರಹಿಸುವಂತೆಯೂ ಒತ್ತಾಯಿಸಿತ್ತು.
ಟಾಸ್ಕ್ ಫೋರ್ಸ್ ಅನ್ನು ಸ್ಥಾಪಿಸುವುದರ ಹೊರತಾಗಿ, ಗುಂಪು ಹಿಂಸಾಚಾರ ಮತ್ತು ಹತ್ಯೆಗಳನ್ನು ಪ್ರಚೋದಿಸುವ ಪ್ರವೃತ್ತಿಯನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಬೇಜವಾಬ್ದಾರಿ ಮತ್ತು ಸಂದೇಶಗಳು, ವೀಡಿಯೊಗಳು ಮತ್ತು ಇತರ ವಸ್ತುಗಳನ್ನು ಪ್ರಸಾರ ಮಾಡುವುದನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.