ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ 14 ವಲಯದ ಪದಾಧಿಕಾರಿಗಳೊಂದಿಗೆ ಹೆಗ್ಗಡೆಯವರನ್ನು ಭೇಟಿಯಾಗಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಸಲಹಾ ಸಮಿತಿ ಸದಸ್ಯರು, ವಲಯಾಧ್ಯಕ್ಷರುಗಳು, ವಲಯ ಕಾರ್ಯದರ್ಶಿಗಳು, ವಲಯದ ಪದಾಧಿಕಾರಿಗಳು ಹಾಗೂ ಸಂಘಟನೆಯ ಸದಸ್ಯರು ಉಪಸ್ಥಿತರಿದ್ದರು.