ADVERTISEMENT
ವಿಧಾನಸಭೆಯ ಕಲಾಪ ಆರಂಭ ಆಗುವುದಕ್ಕೂ ಮೊದಲು ಇವತ್ತು ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಕೂತರೆ, ಅತ್ತ ವಿಧಾನಸೌಧದ ಎದುರಿರುವ ಗಾಂಧಿ ಪ್ರತಿಮೆ ಎದುರು ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಪ್ರತಿಭಟಿಸಿದ್ದಾರೆ.
ಪ್ರಧಾನಿ ಮೋದಿ ವಿರುದ್ಧದ ಮಾಡಲಾಗಿರುವ ಮಾನನಷ್ಟ ಹೇಳಿಕೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇವತ್ತು ರಾಷ್ಟ್ರಾದ್ಯಂತ ಮೌನ ಪ್ರತಿಭಟನೆ ಆಯೋಜಿಸಿದೆ.
ಮೊಳಗಲಿ ಸತ್ಯದ ಘರ್ಜನೆ ಮೊಳಗಲಿ ಎಂಬ ಪೋಸ್ಟರ್ಗಳನ್ನು ಹಿಡಿದು ಬಾಯಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಸಿಎಂ ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್, ಕಾಂಗ್ರೆಸ್ ಶಾಸಕರು ಮತ್ತು ಕಾಂಗ್ರೆಸ್ ಶಾಸಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮೌನ ಪ್ರತಿಭಟನೆ ನಡೆಸುತ್ತಿದೆ.
ಇತ್ತ ಹಿಂದೂ ಕಾರ್ಯಕರ್ತರ ಹತ್ಯೆ, ಜೈನ ಮುನಿ ಹತ್ಯೆ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ, ಕಾಂಗ್ರೆಸ್ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ಶಾಸಕರು ಗಾಂಧಿ ಪ್ರತಿಮೆ ಎದುರು ಧರಣಿ ಕೂತಿದ್ದಾರೆ.
ADVERTISEMENT