ಬಾಡಿಗೆದಾರರಿಗೆ ಉಚಿತ ವಿದ್ಯುತ್ ಸೌಲಭ್ಯ ಸಿಗಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಕೆಲವು ಮಾಧ್ಯಮಗಳ ಬಗ್ಗೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದು, ಸಾರ್ವಜನಿಕರು ಅದಕ್ಕೆ ಬಲಿಯಾಗಬಾರದು ಎಂದು ಕಾಂಗ್ರೆಸ್ ಮನವಿ ಮಾಡಿದೆ.
ನಮ್ಮ ಗ್ಯಾರಂಟಿ ಯೋಜನೆಗಳು ಸಮಾಜ ಕಲ್ಯಾಣದ ಕಾರ್ಯಕ್ರಮಗಳಾಗಿವೆ. ಗೃಹಜ್ಯೋತಿ ಯೋಜನೆಯು ಬಾಡಿಗೆ ಮನೆಯಲ್ಲಿ ವಾಸಿಸುವವರಿಗೂ ಅನ್ವಯವಾಗಲಿದೆ. ಕೆಲವು ಮಾಧ್ಯಮಗಳು ಹಾಗೂ ಬಿಜೆಪಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದು, ಸಾರ್ವಜನಿಕರು ಅದಕ್ಕೆ ಬಲಿಯಾಗಬಾರದು. ಬಾಡಿಗೆ ಮನೆಯ ವಾಸಿಗಳು ಈ ಕೆಳಕಂಡ ಮಾರ್ಗಸೂಚಿಯನ್ನು ಅನುಸರಿಸಿ ಯೋಜನೆಯ ಪ್ರಯೋಜನ ಪಡೆಯಬಹುದು.
ಎಂದು ಕರ್ನಾಟಕ ಕಾಂಗ್ರೆಸ್ ಸ್ಪಷ್ಟಪಡಿಸಿದೆ.
ADVERTISEMENT
ADVERTISEMENT