ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾಂಗ್ರೆಸ್ ನಿಯೋಗ ಎಸಿಬಿಗೆ ದೂರು ನೀಡಿದೆ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ , ಸಿಎಂ ಸೀಟಿಗೆ ದೆಹಲಿಯಲ್ಲಿರುವ ಕೆಲವರು 2,500 ಕೋಟಿ ಕೇಳಿದ್ದರು. ನಾನು ಆಗ ಅವರನ್ನ ಬೈಯ್ದು ಕಳುಹಿಸಿದ್ದೆ ಎಂದಿದ್ದಾರೆ. ಬಿಜೆಪಿ ಶಾಸಕ ಯತ್ನಾಳ್ ಈ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ಹೀಗಾಗಿ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕಾಂಗ್ರೆಸ್ ನಿಯೋಗ ಆರೋಪಿಸಿದೆ.
ಬೆಂಗಳೂರಿನ ಖನಿಜ ಭವನದಲ್ಲಿರುವ ಎಸಿಬಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿರುವ ಕಾಂಗ್ರೆಸ್ ನಿಯೋಗ, ಕೂಡಲೇ ಅವರನ್ನು ವಿಚಾರಗೊಳಪಡಿಸಬೇಕು ಎಂದು ಆಗ್ರಹಿಸಿದೆ.