ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ನ ಮಾಜಿ ಶಾಸಕ ಎಂ.ಎಂ. ಸಜ್ಜನ (95) ಇಂದು ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಶಾಸಕರು ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.
ಮಲ್ಲಪ್ಪ ಮುರಿಗೆಪ್ಪ ಸಜ್ಜನ ಅವರು 1972-78 ರವರೆಗೆ ಮುದ್ದೇಬಿಹಾಳ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಇಂದು ಸಾಯಂಕಾಲ 4 ಗಂಟೆಗೆ ಮುದ್ದೇಬಿಹಾಳ ಪಟ್ಟಣದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಕುಟುಂಬಸ್ಥರು ತಿಳಿಸಿದ್ದಾರೆ.
ಇನ್ನೂ ಮಾಜಿ ಶಾಸಕ ಎಂ.ಎಂ ಸಜ್ಜನ ಅವರ ನಿಧನಕ್ಕೆ ಹಲವು ಗಣ್ಯರು ಮತ್ತು ಮಠಾಧೀಶರು ಕಂಬನಿ ಮಿಡಿದಿದ್ದಾರೆ.