ಒಂದು ಪಕ್ಷ ತೊರೆದು ಇನ್ನೊಂದು ಪಕ್ಷ ಸೇರಿರುವುದು ರಾಜಕೀಯ ಜೀವನದಲ್ಲಿ ನಾನು ಮಾಡಿದ ಮೊದಲ ತಪ್ಪು ಎಂದು ಸಚಿವ ಎಂ.ಟಿ.ಬಿ. ನಾಗರಾಜ್ ಅವರು ಬಹಿರಂಗವಾಗಿ ಪಶ್ಚಾತ್ತಾಪ ಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಪುರಸಭಾ ಸಭಾಂಗಣದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಅಧಿಕಾರಿಗಳ ಹಾಗೂ ಆಡಳಿತ ಮಂಡಳಿ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು ತಮ್ಮ ಅಳಲನ್ನು ತೋಡಿಕೊಂಡು, ಪಾಶ್ಚಾತ್ತಾಪ ಪಟ್ಟಿದ್ದಾರೆ.
ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯದಲ್ಲಿ ನಾನು ಹಣ ಮಾಡಬೇಕು ಎಂದೇನಿಲ್ಲ. ಆ ವಿಷಯದಲ್ಲಿ ನಾನು ಇಂದಿಗೂ ಪರಿಶುದ್ಧನಾಗಿದ್ದೇನೆ. ರಾಜಕೀಯ ಜೀವನದಲ್ಲಿ ನಾನು ಮಾಡಿದ ಒಂದೇ ಒಂದು ತಪ್ಪು ಎಂದರೆ, ‘ಒಂದು ಪಕ್ಷ ಬಿಟ್ಟು ಮತ್ತೊಂದು ಪಕ್ಷಕ್ಕೆ ಸೇರಿರುವುದು’. ಅದರ ಅರಿವು ಈಗ ಆಗುತ್ತಿದೆ.
ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಕಡೆಯವರೇ ನನ್ನನ್ನು ಪಕ್ಷದಿಂದ ಹೊರಗೆ ಕಳುಹಿಸಿದರು ಎಂದು ಸುಬ್ಬಾರೆಡ್ಡಿ ಅವರತ್ತ ತಿರುಗಿ ಪೌರಾಡಳಿತ ಹಾಗೂ ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ.