ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ನಾಗರಾಜು ಯಾದವ್ ಮತ್ತು ಅಬ್ದುಲ್ ಜಬ್ಬರ್ ಅವರಿಗೆ ಟಿಕೆಟ್ ನೀಡಲಾಗಿದೆ.
ಜೂನ್ 3ರಂದು ವಿಧಾನಸಭೆಯಿಂದ ವಿಧಾನಪರಿಷತ್ ಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ 2 ಸ್ಥಾನ ಗೆಲ್ಲುವ ಅವಕಾಶ ಇದೆ.
ಪರಿಷತ್ಗೆ ಟಿಕೆಟ್ ಘೋಷಣೆ ಕಾಂಗ್ರೆಸ್ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಡುವೆ ಸಂಘರ್ಷ ಕಾರಣವಾಗಿತ್ತು.
ಅಬ್ದುಲ್ ಜಬ್ಬರ್ ಸದ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿದ್ದಾರೆ. ನಾಗರಾಜು ಯಾದವ್ ಸದ್ಯ ಕಾಂಗ್ರೆಸ್ ವಕ್ತಾರರಾಗಿದ್ದಾರೆ.