ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರ ಸ್ಥಾನದ ಚುನಾವಣೆ (Congress Presidential Election) ಗೆ ಅಧಿಕೃತವಾಗಿ ದಿನಾಂಕ ನಿಗಧಿಯಾಗಿದೆ. ಇದೇ ಅಗಸ್ಟ್ನಲ್ಲಿ ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.
ಮುಂದಿನ ಎಐಸಿಸಿ ಅಧ್ಯಕ್ಷರ ಚುನಾವಣೆಯ ವೇಳಾಪಟ್ಟಿಯನ್ನು ಅನುಮೋದಿಸಲು ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಭಾನುವಾರ ಸಭೆ ಸೇರಿ ಈ ನಿರ್ಧಾರ ತೆಗೆದುಕೊಂಡಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ವೇಳಾಪಟ್ಟಿ ಇಲ್ಲಿದೆ:
ಸೆಪ್ಟೆಂಬರ್ 22: ಅಧಿಸೂಚನೆ ಹೊರಡಿಸಲಾಗುತ್ತದೆ
ಸೆಪ್ಟೆಂಬರ್ 24ರಿಂದ ಸೆಪ್ಟೆಂಬರ್ 30: ನಾಮಪತ್ರ ಸಲ್ಲಿಸುವ ದಿನಾಂಕ
ಅಕ್ಟೋಬರ್ 1: ಪರಿಶೀಲನೆಯ ದಿನಾಂಕ
ಅಕ್ಟೋಬರ್ 8: ಹಿಂತೆಗೆದುಕೊಳ್ಳುವಿಕೆಯ ಕೊನೆಯ ದಿನಾಂಕ
ಅಕ್ಟೋಬರ್ 17: ಚುನಾವಣಾ ದಿನ
ಅಕ್ಟೋಬರ್ 19: ಎಣಿಕೆಯ ದಿನಾಂಕ ಮತ್ತು ಫಲಿತಾಂಶದ ಘೋಷಣೆ (ಅಗತ್ಯವಿದ್ದರೆ)
ಶುಕ್ರವಾರ ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಆಘಾತಕಾರಿ ರಾಜೀನಾಮೆ ಮತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರು ಬರೆದ ಪತ್ರ ಬರೆದ ನಂತರ ಪಕ್ಷದಲ್ಲಿ ಹೊಸ ಕೋಲಾಹಲದ ನಡುವೆ ಈ ಬೆಳವಣಿಗೆ ನಡೆದಿದೆ.
ಈ ವರ್ಷ ಆಗಸ್ಟ್ 21 ರಿಂದ ಸೆಪ್ಟೆಂಬರ್ 20 ರ ನಡುವೆ ಹೊಸ ಪಕ್ಷದ ಅಧ್ಯಕ್ಷರ ಆಯ್ಕೆ (Congress Presidential Election) ನಡೆಯಲಿದೆ ಎಂದು ಕಾಂಗ್ರೆಸ್ ಕಳೆದ ವರ್ಷ ಅಕ್ಟೋಬರ್ನಲ್ಲಿ ಘೋಷಿಸಿತ್ತು. 2019 ರಲ್ಲಿ ನಡೆದ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಸತತ ಎರಡನೇ ಸೋಲಿನ ನಂತರ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಹಂಗಾಮಿ ಅಧ್ಯಕ್ಷರಾಗಿ ಮತ್ತೆ ಪಕ್ಷದ ಆಡಳಿತವನ್ನು ವಹಿಸಿಕೊಂಡ ಸೋನಿಯಾ ಗಾಂಧಿ, ಜಿ -23 ನಾಯಕರ ಬಹಿರಂಗ ಬಂಡಾಯದ ನಂತರ ಆಗಸ್ಟ್ 2020 ರಲ್ಲಿ ರಾಜೀನಾಮೆ ನೀಡಲು ಮುಂದಾಗಿದ್ದರು, ಆದರೆ ಸಿಡಬ್ಲ್ಯೂಸಿ ಅವರನ್ನು ಮುಂದುವರಿಸಲು ಒತ್ತಾಯಿಸಿತ್ತು.