ಕಾಂಗ್ರೆಸ್ ಅಧ್ಯಕ್ಷ ಚುನಾವಣೆ (Congress Presidential Election) ನಿಮಿತ್ತ ಇಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ (Shashi Taroor) ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ದೆಹಲಿಯ ಪಕ್ಷದ ಪ್ರಧಾನ ಕಚೇರಿಗೆ ತಮ್ಮ ಬೆಂಬಲಿಗ ನಾಯಕರೊಂದಿಗೆ ಆಗಮಿಸಿದ ಶಶಿತರೂರ್ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ತಮ್ಮ ಪ್ರಮಾಣ ಪತ್ರವನ್ನು ಸಲ್ಲಿಸಿದರು.
ಪಕ್ಷದ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ತರೂರ್ (Shashi Taroor) ಬೆಳಗ್ಗೆ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು.
ಇದನ್ನೂ ಓದಿ :Congress President Election : ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಗೆ ವೇಳಾಪಟ್ಟಿ ಪ್ರಕಟ
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಅಭ್ಯರ್ಥಿಯಾಗಿ ನಾನು ಈಗಷ್ಟೇ ನಾಮಪತ್ರ ಸಲ್ಲಿಸಿದ್ದೇನೆ. ಭಾರತದ ಏಕೈಕ ಪಕ್ಷಕ್ಕೆ ತನ್ನ ನಾಯಕನನ್ನು ಆಯ್ಕೆ ಮಾಡಲು ಮುಕ್ತ ಪ್ರಜಾಸತ್ತಾತ್ಮಕ ಪ್ರಕ್ರಿಯೆಯೊಂದಿಗೆ ಸೇವೆ ಸಲ್ಲಿಸುವುದು ಒಂದು ವಿಶೇಷವಾಗಿದೆ. ಸೋನಿಯಾ ಗಾಂಧಿ ಅವರ ಮಾರ್ಗದರ್ಶನ ಮತ್ತು ದೂರದೃಷ್ಟಿಯನ್ನು ಬಹಳವಾಗಿ ಪ್ರಶಂಸಿಸುತ್ತೇನೆ ಎಂದು ಹೇಳಿದ್ದಾರೆ.
Paid tribute to the man who built India’s bridge to the 21st century this morning.
“India is an Old country but a young nation… I dream of India Strong, Independent, Self-Reliant and in the front rank of the nations of the world, in the service of mankind.”
~ Rajiv Gandhi pic.twitter.com/DQtWU3aDdr
— Shashi Tharoor (@ShashiTharoor) September 30, 2022
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರೂ ಇಮದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆಗೆ ಸಕಲ ಸಿದ್ಧತೆ ಮಾಡಲಾಗಿದ್ದು, ಪಕ್ಷದ ಮುಖಂಡರು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಸಲ್ಲಿಸಬಹುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ : Congress Presidential Election : ಅಕ್ಟೋಬರ್ನಲ್ಲಿ ಚುನಾವಣೆಗೆ ನಿರ್ಧಾರ – ವೇಳಾಪಟ್ಟಿ ಪ್ರಕಟ