ಛತ್ತೀಸ್ ಗಢ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸೋಲುಕಂಡ ಕಾಂಗ್ರೆಸ್, ಚುನಾವಣಾ ಫಲಿತಾಂಶದ ಕುರಿತಾಗಿ ಪರಾಮರ್ಶಿಸಲು ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ 2 ಪತ್ಯೇಕ ಸಭೆಗಳನ್ನು ಆಯೋಜಿಸಿತು.
ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ ರಾಜ್ಯ ಘಟಕಗಳು, ಪಕ್ಷದ ಬೂತ್ ಮಟ್ಟದ ವರದಿಗಳ ಕುರಿತಾಗಿ ಪರಾಮರ್ಶಿಸಲಾಯ್ತು.
ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಚುನಾವಣಾ ಫಲಿತಾಂಶವನ್ನು ನಾವೆಂದಿಗೂ ನಿರೀಕ್ಷಿಸಿರಲಿಲ್ಲ. ಜನತೆಗೆ ಮತ್ತಷ್ಟು ಹತ್ತಿರವಾಗುವ ನಿಟ್ಟಿನಲ್ಲಿ ನಾವು ಪಕ್ಷವನ್ನು ಇನ್ನಷ್ಟು ಬಲವರ್ಧನೆ ಮಾಡುತ್ತೇವೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ಬಿಜೆಪಿಯನ್ನು ಬಗ್ಗುಬಡಿಯಲು ಸಾಧ್ಯಾವಾಗುವ ರೀತಿಯಲ್ಲಿ ಪಕ್ಷವನ್ನು ಸಂಘಟಿಸುತ್ತೇವೆ ಎಂದರು.