ADVERTISEMENT
ಮಹಾರಾಷ್ಟ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿರುವ ಕಾಂಗ್ರೆಸ್ ಇತ್ತ ಪಶ್ವಿಮ ಬಂಗಾಳದಲ್ಲಿ ಅತೀ ದೊಡ್ಡ ಐತಿಹಾಸಿಕ ಗೆಲುವು ಸಾಧಿಸಿದೆ.
ಪಶ್ಚಿಮ ಬಂಗಾಳದ ಸಾಗರ್ದಿಘಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 22,980 ಮತಗಳಿಂದ ಪ್ರಚಂಡ ಜಯ ಸಾಧಿಸಿದ್ದಾರೆ.
ಈ ಕ್ಷೇತ್ರದಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಗೆದ್ದಿದ್ದು 1972. 50 ವರ್ಷಗಳ ಬಳಿಕ ಈ ಕ್ಷೇತ್ರವನ್ನು ಮತ್ತೆ ಗೆಲ್ಲುವ ಮೂಲಕ ಕಾಂಗ್ರೆಸ್ ಐತಿಹಾಸಿಕ ಗೆಲುವು.
ಕಾಂಗ್ರೆಸ್ ಅಭ್ಯರ್ಥಿ ಬೇರಾನ್ ಬಿಸ್ವಾಸ್ ಅವರು ಆಡಳಿತಪಕ್ಷ ತೃಣಮೂಲ ಕಾಂಗ್ರೆಸ್ನ ಅಭ್ಯರ್ಥಿ ದೇಬ್ಶೀಶ್ ಬ್ಯಾನರ್ಜಿ ಅವರನ್ನು ಸೋಲಿಸಿದ್ದಾರೆ.
2021ರಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಎಡಪಕ್ಷಗಳಾಗಲೀ ಕಾಂಗ್ರೆಸ್ ಆಗಲೀ ಒಂದೇ ಒಂದು ಸೀಟು ಗೆದ್ದಿರಲಿಲ್ಲ.
ಉಪ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಕೊನೆಗೂ ವಿಧಾನಸಭೆಯಲ್ಲಿ ಕಾಂಗ್ರೆಸ್ ತನ್ನ ಖಾತೆ ತೆರೆದಿದೆ.
ಉಪ ಚುನಾವಣೆಯಲ್ಲಿ ಎಡಪಕ್ಷಗಳು ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ವಿರೋಧಿ ಮತಗಳು ಬಿಜೆಪಿ ಬದಲಿಗೆ ಎಡಪಕ್ಷ ಮತ್ತು ಕಾಂಗ್ರೆಸ್ ವಾಲುತ್ತಿರುವ ಸುಳಿವು ಇದಾಗಿದೆ.
ADVERTISEMENT