ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದು, ಬಿಜೆಪಿ ಭಾರೀ ಮುಖಭಂಗ ಅನುಭವಿಸಿದೆ.
ಪಾಲಿಕೆ ಮೇಯರ್ ಆಗಿ ಕಾಂಗ್ರೆಸ್ ಕಾರ್ಪೋರೇಟರ್ ಮೆಹಜಬೀನ್ ಹೊರ್ತಿ ಆಯ್ಕೆ ಆಗಿದ್ದಾರೆ. ಉಪ ಮೇಯರ್ ಆಗಿ ಕಾಂಗ್ರೆಸ್ ಕಾರ್ಪೊರೇಟರ್ ದಿನೇಶ್ ಹಳ್ಳಿ ಆಯ್ಕೆಯಾಗಿದ್ದಾರೆ. ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪಮೇಯರ್ ಸ್ಥಾನ ಎಸ್ಟಿ ವರ್ಗಕ್ಕೆ ಮೀಸಲಾಗಿತ್ತು.
ಪಾಲಿಕೆಯಲ್ಲಿ ಕಾಂಗ್ರೆಸ್ನ 10 ಮಂದಿ ಕಾರ್ಪೋರೇಟರ್ಗಳಿದ್ದಾರೆ. ಐವರು ಪಕ್ಷೇತರರು, AIMIM ಪಕ್ಷದ ಇಬ್ಬರು ಮತ್ತು ಜೆಡಿಎಸ್ನ ಓರ್ವ ಕಾರ್ಪೋರೇಟರ್ ಕಾಂಗ್ರೆಸ್ಗೆ ಬೆಂಬಲ ಸೂಚಿಸಿದರು.
ಜೊತೆಗೆ ಸಚಿವರಾಗಿರುವ ಶಾಸಕರಾದ ಎಂ ಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಥೋಡ್ ಮತಗಳ ಬೆಂಬಲದೊಂದಿಗೆ ಕಾಂಗ್ರೆಸ್ ಮೇಯರ್ ಮತ್ತು ಉಪಮೇಯರ್ ಸ್ಥಾನ ಗೆದ್ದಿದೆ.
ಬಿಜೆಪಿಯ 16 ಸದಸ್ಯರು ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಚುನಾವಣಾ ಪ್ರಕ್ರಿಯೆ ಬಹಿಷ್ಕರಿಸಿ ಹೊರನಡೆದರು.
ADVERTISEMENT
ADVERTISEMENT