ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರ ವಾಗಿರುವ ದಾರಾವತಿ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಹನುಮ ಜನಿಸಿದ್ದು ಕರ್ನಾಟಕದಲ್ಲಿ. ಆತ ಜನಿಸಿದ ಹೊಸಪೇಟೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಈ ಸಾಲಿನ ಬಜೆಟ್ನಲ್ಲಿ 100 ಕೋಟಿ ರೂ.ಗಳ ಅನುದಾನ ಮೀಸಲಿಡಲಾಗಿದೆ. ಬೆಟ್ಟಕ್ಕೆ ರೋಪ್ ವೇ , ಕ್ಷೇತ್ರಕ್ಕೆ ಭೇಟಿ ನೀಡುವ ಜನರ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
https://youtu.be/bNMdj79VOCk