ಮಲೆನಾಡಿನಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಕಳೆದ 3 ದಿನನಗಳಿಂದ ಜಿಲ್ಲೆಯ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮೊನ್ನೆ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆಯಾಗಿತ್ತು. ಇದೀಗ ಉಳಿದ ನಾಲ್ಕು ತಾಲೂಕಿಗೂ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಭದ್ರಾವತಿ, ಸೊರಬ ಹಾಗೂ ಶಿಕಾರಿಪುರ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.
ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.