ಸಂತೋಷ್ ಸಾವಿಗೆ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ನೇರ ಕಾರಣ. ಅವರನ್ನು ಕೂಡಲೇ ಬಂಧಿಸಬೇಕು. ಅಲ್ಲಿಯವರೆಗೂ ಅಂತ್ಯಕ್ರಿಯೆ ಮಾಡಲ್ಲ ಎಂದು ಸಹೋದರ ಪ್ರಶಾಂತ್ ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸಹೋದರ 4 ಕೋಟಿ ರೂ. ಕೆಲಸ ಮಾಡಿದ್ದ. ಇಲ್ಲಿಯವರೆಗೂ ಒಂದು ರೂಪಾಯಿಯೂ ಬಂದಿಲ್ಲ. ಸಂತೋಷ್ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಈಶ್ವರಪ್ಪ 40% ಕಮಿಷನ್ ಕೇಳಿದ್ದಾರೆ. ಜೀವ ಬೇದರಿಕೆ ಸಹ ಹಾಕಿದ್ದರು. ತಮ್ಮನ ಸಾವಿಗೆ ನ್ಯಾಯ ಸಿಗಲೇಬೇಕು.
ಬೆಳಗಾವಿಯ ಸಮರ್ಥ ಕಾಲೋನಿಯಲ್ಲಿ ಸಂತೋಷ್ ಇರುತ್ತಿದ್ದ. ಸಚಿವ ಈಶ್ವರಪ್ಪ ಅವರನ್ನು ಅನೇಕ ಸಲ ಭೇಟಿಯಾಗಿದ್ದ. ಈಶ್ವರಪ್ಪ ಅರೆಸ್ಟ್ ಆಗುವವರೆಗೂ ಅಂತ್ಯಕ್ರಿಯೆ ಮಾಡಲ್ಲ. ಆತನಿಗೆ ಒಂದು ವರ್ಷದ ಮಗು ಸಹ ಇದೆ ಎಂದರು.
ಉಡುಪಿಯ ಲಾಡ್ಜ್ವೊಂದರಲ್ಲಿ ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂತೋಷ್ ಪಾಟೀಲ್ ಸಚಿವ ಕೆಎಸ್ ಈಶ್ವರಪ್ಪನವರ ವಿರುದ್ಧ 40 % ಲಂಚದ ಆರೋಪವನ್ನು ಮಾಡಿದ್ದರು. ಅಲ್ಲದೇ, ಈ ಸಂಬಂಧ ಪ್ರಧಾನಿ ಮೋದಿಯವರಿಗೂ ಪತ್ರ ಬರೆದಿದ್ದರು.
https://youtu.be/hm_RqQg_qUg