`ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಕೆ. ಪಾಟೀಲ್ ಸಾವು ಹತ್ಯೆಗೆ ಸಮಾನ. ಹೀಗಾಗಿ ಈಶ್ವರಪ್ಪರನ್ನು ಸಂಪುಟದಿAದ ಕಿತ್ತು ಹಾಕುವುದು ಮಾತ್ರವಲ್ಲದೆ, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ಹ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ.
ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಈಶ್ವರಪ್ಪರನ್ನು ಬಂಧಿಸಿ ಜೈಲಿಗಟ್ಟಬೇಕು. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಸಂದರ್ಭದಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ಆರೋಪಿತ ಸಚಿವರ ರಾಜೀನಾಮೆ ಪಡೆದಿತ್ತು. ಆದರೂ ಆ ಪ್ರಕರಣಕ್ಕೂ ಇದಕ್ಕೂ ಯಾವುದೇ ಹೋಲಿಕೆ ಮಾಡಲಾಗದು. ಮಾನಸಿಕವಾಗಿ ಯಾವುದೇ ಒತ್ತಡವಿಲ್ಲದ ಸಂತೋಷ್ ಪಾಟೀಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದರಿAದ ಇದೊಂದು ಗಂಭೀರ ಪ್ರಕರಣ ಎಂದರು.
https://www.youtube.com/watch?v=kT-rmHZpsUA