ಕರ್ನಾಟಕದಲ್ಲಿ ಕೋವಿಡ್ ಸೋಂಕಿನ (Corona Case) ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೆಲವೊಂದಿಷ್ಟು ಬಿಗಿಕ್ರಮಗಳನ್ನು ಮತ್ತೆ ಜಾರಿಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ (Mask Fine) ಮಾಡಲಾಗಿದೆಯಾದರೂ ದಂಡ ವಿಧಿಸುತ್ತಿಲ್ಲ.
ಆದರೆ ಸೋಂಕಿನ ಪ್ರಮಾಣ ಏರುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಹಾಕದೇ ಇದ್ದರೆ ಮತ್ತೆ ದಂಡ ವಿಧಿಸುವ ಕ್ರಮ ಜಾರಿಗೊಳಿಸುವ ಸಾಧ್ಯತೆ ಇದೆ.
ಈ ಹಿಂದೆ ನಗರ ಪ್ರದೇಶದಲ್ಲಿ ಮಾಸ್ಕ್ ಹಾಕದೇ ಇದ್ದರೆ 250 ರೂಪಾಯಿ ಮತ್ತು ಗ್ರಾಮೀಣ ಭಾಗದಲ್ಲಿ 100 ರೂಪಾಯಿ ದಂಡ ವಿಧಿಸಲಾಗ್ತಿತ್ತು.
145 ದಿನಗಳ ಬಳಿಕ ಕರ್ನಾಟಕದಲ್ಲಿ ಮೊದಲ ಬಾರಿಗೆ 24 ಗಂಟೆಯಲ್ಲಿ ಸೋಂಕಿಗೆ ಐವರು ಮೃತಪಟ್ಟಿದ್ದಾರೆ.
ಇದನ್ನೂ ಓದಿ:
Mysuru Dasara: ನಾಡಹಬ್ಬ ದಸರಾ: ಹೆಣ್ಣಾನೆ-ಗಂಡಾನೆಗಳ ತೂಕ ಎಷ್ಟು ಗೊತ್ತಾ..?